ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯ 36 ಮೀಸಲು ಕ್ಷೇತ್ರಗಳಿವೆ. ಮೊದಲ ಪಟ್ಟಿಯಲ್ಲಿ 22 ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಘೋಷಿಸಲಾಗಿದೆ. ಈ ಪೈಕಿ, ಬಲಗೈ ಒಳ ಪಂಗಡದ 12, ಎಡಗೈ ಒಳ ಪಂಗಡದ ನಾಲ್ವರು, ಲಂಬಾಣಿ ಸಮುದಾಯದ ನಾಲ್ವರು ಹಾಗೂ ಬೋವಿ ಸಮುದಾಯದ ಇಬ್ಬರಿಗೆ ಅವಕಾಶ ನೀಡಲಾಗಿದೆ.
‘ಎಡಗೈ ಒಳ ಪಂಗಡದ ಮುಖಂಡರಿಗೆ 14 ಕ್ಷೇತ್ರಗಳಲ್ಲಿ ಅವಕಾಶ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೆವು. ಈಗ ನಾಲ್ಕು ಕ್ಷೇತ್ರಗಳಲ್ಲಿ ಅವಕಾಶ ನೀಡಿದ್ದಾರೆ. ಎರಡನೇ ಹಾಗೂ ಮೂರನೇ ಪಟ್ಟಿಯಲ್ಲಿ ಇನ್ನಷ್ಟು ಮಂದಿಗೆ ಅವಕಾಶ ಸಿಗುವ ನಿರೀಕ್ಷೆ ಇದೆ. ಕಳೆದ ಬಾರಿಗಿಂತ ಹೆಚ್ಚಿನ ಮಂದಿಗೆ ಟಿಕೆಟ್ ಸಿಗಲಿದೆ’ ಎಂದು ಸಮುದಾಯದ ಮುಖಂಡರಾದ ಎಲ್.ಹನುಮಂತಯ್ಯ ಹಾಗೂ ಎಚ್.ಆಂಜನೇಯ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.