ಶುಕ್ರವಾರ, ಫೆಬ್ರವರಿ 26, 2021
31 °C

‘ಎಲ್ಲಾ ಕೊಲೆಗೂ ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆ ಅನ್ವಯ ಆಗದು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಐಪಿಸಿ ಅಡಿಯಲ್ಲಿ ದೌರ್ಜನ್ಯಕ್ಕೆ ಒಳಗಾದವರು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರು ಎಂಬ ಒಂದೇ ಕಾರಣಕ್ಕೆ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಶಿಕ್ಷೆ ವಿಧಿಸಲು ಆಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಕೊಲೆಯಾದ ವ್ಯಕ್ತಿ ಎಸ್‌ಸಿಎಸ್‌ಟಿ ಎಂಬ ಕಾರಣಕ್ಕೆ ಆರೋಪಿಗಳಿಗೆ ಐಪಿಸಿ ಮತ್ತು ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆಯಡಿಯೂ ಅಧೀನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಆಧರಿಸಿ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ಕೆ. ನಟರಾಜನ್ ಒಳಗೊಂಡ ಪೀಠ ಈ ಆದೇಶ ನೀಡಿದೆ.

ಮಂಗಳೂರಿನಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಎರಡೂ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಜಾತಿ ವೈಷಮ್ಯದ ಕಾರಣಕ್ಕೆ ಕೊಲೆ ನಡೆದಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಅಂತಹ ಸಂದರ್ಭದಲ್ಲಿ ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆಯನ್ನು ಅನ್ವಯಿಸಬಾರದು ಎಂದು ಪೀಠ ಹೇಳಿತು.

ಕೊಲೆ ಮಾಡಿದ ವ್ಯಕ್ತಿಯ ಜೊತೆಗಿದ್ದವರಿಗೂ ಒಂದೇ ರೀತಿಯ ಶಿಕ್ಷೆ ವಿಧಿಸುವುದು ಕೂಡ ತರವಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು