ಬುಧವಾರ, ಡಿಸೆಂಬರ್ 7, 2022
22 °C

ಎಸ್‌ಸಿ, ಎಸ್‌ಟಿ ಸಮಾವೇಶ: 20ರಂದು ಸಭೆ –ಜಿ. ಪರಮೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮಾವೇಶ ನಡೆಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದು, ಈ ಬಗ್ಗೆ ಚರ್ಚಿಸಲು ಇದೇ 20ರಂದು ಪೂರ್ವಭಾವಿ ಸಭೆ ನಡೆಸುತ್ತೇವೆ’ ಎಂದು ಕಾಂಗ್ರೆಸ್‌ ಶಾಸಕ ಜಿ. ಪರಮೇಶ್ವರ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಸಮಾವೇಶ ಆಯೋಜಿಸುವ ಬಗ್ಗೆ ನಾವಿಬ್ಬರೂ ಚರ್ಚೆ ಮಾಡಿದ್ದೇವೆ. ಯಾವಾಗ ಸಮಾವೇಶ ನಡೆಸಬೇಕು, ಯಾರನ್ನು ಕರೆಯಬೇಕೆಂದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸುತ್ತೇವೆ’ ಎಂದರು.

‘ಪಕ್ಷದ ಮುಖಂಡ ಎಚ್‌.ಸಿ. ಮಹದೇವಪ್ಪ ಅವರ ಜೊತೆ ಈಗಾಗಲೇ ಈ ಬಗ್ಗೆ ಮಾತನಾಡಿದ್ದೇನೆ. ಸಮಾವೇಶ ಆಯೋಜಿಸುವ ವಿಚಾರದಲ್ಲಿ ಅವರಿಗೂ ಹೆಚ್ಚಿನ ಜವಾಬ್ದಾರಿ ವಹಿಸುತ್ತೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು