ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗಮಗಳಿಗೆ ₹857.5 ಕೋಟಿ ಹೆಚ್ಚುವರಿ ಅನುದಾನ: ಬೊಮ್ಮಾಯಿ

Last Updated 7 ಜೂನ್ 2022, 20:24 IST
ಅಕ್ಷರ ಗಾತ್ರ

ಬೆಂಗಳೂರು: ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಗಳ ವ್ಯಾಪ್ತಿಯಲ್ಲಿರುವ 19 ನಿಗಮಗಳಿಗೆ ₹ 857.5 ಕೋಟಿ ಹೆಚ್ಚುವರಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳ ಅನುದಾನ ಹಂಚಿಕೆಯನ್ನು ಹೆಚ್ಚಿಸಲಾಗಿದೆ. ಈಗ ಹೆಚ್ಚುವರಿ ಅನುದಾನದ ಹಂಚಿಕೆಯೊಂದಿಗೆ ಈ ನಿಗಮಗಳಿಗೆ ಪ್ರಸಕ್ತ ವರ್ಷ ಒಟ್ಟು ₹ 3,172.13 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಈ ನಿಗಮಗಳಲ್ಲಿ ₹ 1,611.92 ಕೋಟಿ ಆರಂಭಿಕ ಶಿಲ್ಕು ಇತ್ತು. ಬಜೆಟ್‌ನಲ್ಲಿ ₹ 563.52 ಕೋಟಿ ಅನುದಾನ ಹಂಚಿಕೆ ಮಾಡಲಾಗಿತ್ತು. ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಗಮಗಳಿಗೆ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಪಿ) ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಯೋಜನೆ (ಟಿಎಸ್‌ಪಿ) ಅಡಿಯಲ್ಲಿ ₹ 175 ಕೋಟಿ ಒದಗಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT