ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಮೀಸಲಾತಿ ಜಾರಿಗೆ ಮೇ 20ರ ಗಡುವು

Last Updated 17 ಮೇ 2022, 17:03 IST
ಅಕ್ಷರ ಗಾತ್ರ

ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ನೀಡುವ ನ್ಯಾ.ಎಚ್.ಎನ್.ನಾಗಮೋಹನ್‌ ದಾಸ್ ಸಮಿತಿ ವರದಿಯನ್ನು ಮೇ 20ರೊಳಗೆ ಜಾರಿ ಮಾಡದಿದ್ದರೆ, ಪ್ರತಿಭಟನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು’ ಎಂದುಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಎಚ್ಚರಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಸಮಿತಿ ಸಂಚಾಲಕ ಬಸವರಾಜ ನಾಯಕ,‘ಶಿಕ್ಷಣ ಮತ್ತು ಉದ್ಯೋಗದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿಗೆ ಶೇ 17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿಜಾರಿಗೆ ಒತ್ತಾಯಿಸಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಹೋರಾಟ ಮೇ 20ಕ್ಕೆ 100 ದಿನಗಳನ್ನು ಪೂರೈಸಲಿದೆ. ಈ ಗಡುವಿನೊಳಗೆ ಬೇಡಿಕೆ ಈಡೇರದಿದ್ದರೆ, ಪ್ರತಿಭಟನೆ ತೀವ್ರಗೊಳ್ಳಲಿದೆ’ ಎಂದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ,‘ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಬೃಹತ್ ಸಮಾವೇಶ ನಡೆಸಿ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸಲಾಗುವುದು’ ಎಂದರು.

‘10 ವರ್ಷಗಳಿಗೊಮ್ಮೆ ಮೀಸಲಾತಿ ಪರಿಷ್ಕರಣೆ ಆಗಬೇಕು. ಆದರೆ, ಇನ್ನೂ ಹಳೆಯ ಮೀಸಲಾತಿ ಪದ್ಧತಿಯಲ್ಲೇ ಇದ್ದೇವೆ. ನಮ್ಮ ಬೇಡಿಕೆ ಈಡೇರುವ ತನಕ ಹೋರಾಟ ನಿಲ್ಲುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT