ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರ ಮೀಸಲಾತಿ ಹೆಚ್ಚಳ: ಬಜೆಟ್ ಅಧಿವೇಶನದಲ್ಲಿಯೇ ಜಾರಿಯಾಗಲಿ: ಸಿದ್ದರಾಮಯ್ಯ

Last Updated 10 ಫೆಬ್ರುವರಿ 2023, 4:03 IST
ಅಕ್ಷರ ಗಾತ್ರ

ಹರಿಹರ (ದಾವಣಗೆರೆ ಜಿಲ್ಲೆ): ‌‌ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹಾಗೂ ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದೆ. ಈಗ ನಡೆಯುತ್ತಿರುವ ಸಂಸತ್‌ನ ಬಜೆಟ್‌ ಅಧಿವೇಶನದಲ್ಲೇ ಸಂವಿಧಾನದ ಪರಿಚ್ಛೇದ- 9ಕ್ಕೆ ಸೇರಿಸಿ ಮೀಸಲಾತಿ ಹೆಚ್ಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

ವಾಲ್ಮೀಕಿ ಜಾತ್ರೆ ಅಂಗವಾಗಿ ಗುರುವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಧಿವೇಶನದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳದ ಮಸೂದೆ ಪಾಸ್‌ ಅಂಗೀಕರಿಸಬೇಕು. ಇಲ್ಲದಿದ್ದರೆ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ ಎಂಬುದು ಹಣೆಗೆ ತುಪ್ಪ ಹಚ್ಚಿದಂತಾಗಲಿದೆ’ ಎಂದು ಟೀಕಿಸಿದರು.

‘ಸಂವಿಧಾನವನ್ನು ಬದಲಿಸುವ ಹಾಗೂ ಹಾಳು ಮಾಡುವ ಬಗ್ಗೆ ಯಾರೇ ಮಾತನಾಡಿದರೂ ಶೂದ್ರರು ಕೂಡಲೇ ವಿರೋಧಿಸಬೇಕು. ಯಾವುದೇ ಹೋರಾಟ ನಡೆಸದಿದ್ದರೂ ಸಂವಿಧಾನಕ್ಕೆ ವಿರುದ್ಧವಾಗಿ ಸಾಮಾನ್ಯ ವರ್ಗದವರಿಗೆ ಶೇ 10ರಷ್ಟು ಮೀಸಲಾತಿ ನೀಡಲಾಗಿದೆ. ಆದರೂ ಲೋಕಸಭೆ, ರಾಜ್ಯಸಭೆಯಲ್ಲಿ ಒಂದೇ ದಿನ ನಿರ್ಧಾರ ಕೈಗೊಳ್ಳಲಾಗಿದೆ. ಮೀಸಲಾತಿ ಹೆಚ್ಚಳದ ಜಾರಿಯನ್ನೂ 2 ದಿನಗಳಲ್ಲಿ ಮಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT