ಗುರುವಾರ , ಡಿಸೆಂಬರ್ 1, 2022
27 °C

ಎಸ್‌.ಸಿ, ಎಸ್.ಟಿ ಮೀಸಲಾತಿ ಹೆಚ್ಚಳ: ಸಿಎಂ ನೇತೃತ್ವದಲ್ಲಿ ಸಭೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ‌ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆ ಆರಂಭವಾಗಿದೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಸಚಿವರಾದ ಜೆ.ಸಿ. ಮಾಧುಸ್ವಾಮಿ, ಆರ್. ಅಶೋಕ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಅನಂದ್ ಸಿಂಗ್, ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಪಾಲ್ಗೊಂಡಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕ ಸತೀಶ ಜಾರಕಿಹೊಳಿ, ಕಾಂಗ್ರೆಸ್ ಮುಖಂ ವಿ.ಎಸ್. ಉಗ್ರಪ್ಪ ಸೇರಿದಂತೆ ಹಲವರು ಸಭೆಯಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು