ಸೋಮವಾರ, ಸೆಪ್ಟೆಂಬರ್ 28, 2020
23 °C

‘ಪ್ರಮಾಣಪತ್ರ ಕೇಳದೆ ಶಾಲೆಗೆ ದಾಖಲಿಸಿಕೊಳ್ಳಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಾಥಮಿಕ ಶಾಲೆ–ಸಾಂದರ್ಭಿಕ ಚಿತ್ರ

ಬೆಂಗಳೂರು: ‘ರಾಜ್ಯದ ಶಾಲೆಗಳಲ್ಲಿ ಈ ವೇಳೆಗೆ 10 ಲಕ್ಷ ವಿದ್ಯಾರ್ಥಿಗಳು ದಾಖಲಾಗಬೇಕಿತ್ತು. ಆದರೆ ಕೊರೊನಾ ಸೋಂಕಿನ ಕಾರಣದಿಂದಾಗಿ ಅದು ಸಾಧ್ಯವಾಗಿಲ್ಲ. ಯಾವುದೇ ದಾಖಲೆಗಳನ್ನು ಅಪೇಕ್ಷಿಸದೇ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಸೂಚಿಸಿದರು. 

ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ‘ ಯಾವ ದಿನವೇ ಆಗಲಿ, ಶಾಲೆ ಸೇರಲು ಬರುವ ಮಕ್ಕಳನ್ನು ಮೊದಲು ದಾಖಲಿಸಿಕೊಳ್ಳಬೇಕು. ಆ.10ರಿಂದ 15ರವರೆಗೆ ಮಕ್ಕಳ ಶಾಲಾ ದಾಖಲಾತಿಯು ಆಂದೋಲನದ ಮಾದರಿಯಲ್ಲಿ ನಡೆಯಬೇಕು’ ಎಂದು ಅವರು ಹೇಳಿದರು. 

‘ಈಗಾಗಲೇ ಶಾಲಾ ಮಕ್ಕಳಿಗೆ ಪುಸ್ತಕ, ನೋಟ್‌ಬುಕ್‌ಗಳನ್ನು ಒದಗಿಸಲಾಗಿದೆ. ಇನ್ನೂ ಅಗತ್ಯವಿರುವವರು ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಿ ಪುಸ್ತಕಗಳನ್ನು ಪಡೆಯಬಹುದು’ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು