ಶುಕ್ರವಾರ, ಜನವರಿ 22, 2021
19 °C

ಡಿಸೆಂಬರ್‌ ಅಂತ್ಯದವರೆಗೆ ಶಾಲೆ-ಪದವಿಪೂರ್ವ ಕಾಲೇಜು ತೆರೆಯಲ್ಲ: ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಡಿಸೆಂಬರ್‌ ಅಂತ್ಯದವರೆಗೆ ಶಾಲೆ– ಪದವಿಪೂರ್ವ ಕಾಲೇಜುಗಳನ್ನು ಆರಂಭಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಶಾಲೆ ಆರಂಭಿಸುವ ಕುರಿತು ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಸಭೆಯಲ್ಲಿ ಶಿಕ್ಷಣ ತಜ್ಞರು, ಶಿಕ್ಷಣ ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಭಿಪ್ರಾಯದ ಬಗ್ಗೆ ಚರ್ಚೆ ನಡೆಯಿತು’ ಎಂದರು.

‘ಡಿಸೆಂಬರ್‌ ಕೊನೆಯಲ್ಲಿ ಮತ್ತೊಮ್ಮೆ ಸಭೆ ಸೇರಿ ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ಯಾವುದೇ ಸನ್ನಿವೇಶದಲ್ಲಿ ಕೋವಿಡ್‌ ಜಾಸ್ತಿ ಆಗಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಾಲೆಗಳನ್ನು ಆರಂಭಿಸಿದರೆ ಮಕ್ಕಳಿಗೆ ತೊಂದರೆ ಆಗಬಬಹುದು. ಹೀಗಾಗಿ, ಒಮ್ಮತದಿಂದ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು