ಭಾನುವಾರ, ಮಾರ್ಚ್ 26, 2023
24 °C

ಗ್ರಾಮ ಪಂಚಾಯಿತಿಗೊಂದು ಶಾಲಾ ಸಂಕೀರ್ಣ: ಬಿ.ಸಿ. ನಾಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಸುಸಜ್ಜಿತವಾದ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ ಅಗತ್ಯವಿದೆ. ಅದಕ್ಕೆ ಪೂರಕವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಲ್ಲ ಮೂಲಸೌಕರ್ಯ ಇರುವ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದರು.

ರಾಜ್ಯದ 22,718 ಕಿರಿಯ ಪ್ರಾಥಮಿಕ ಶಾಲೆಗಳ ಪೈಕಿ 14,230 ಶಾಲೆಗಳಲ್ಲಿ 40ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇದೆ. 22,710 ಹಿರಿಯ ಪ್ರಾಥಮಿಕ ಶಾಲೆಗಳ ಪೈಕಿ 2,421 ಶಾಲೆಗಳಲ್ಲಿ 35ಕ್ಕಿಂತ ಕಡಿಮೆ ಮಕ್ಕಳು ದಾಖಲಾಗಿದ್ದಾರೆ‌. ಸರ್ಕಾರಿ ಶಾಲೆಗಳು ಮತ್ತು ಕನ್ನಡ ಕಲಿಕೆ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು