ಶನಿವಾರ, ಏಪ್ರಿಲ್ 17, 2021
27 °C

ಶಾಲಾ ನೋಂದಣಿ ನವೀಕರಣಕ್ಕೆ ವಿನಾಯಿತಿ: ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ ಬಿಕ್ಕಟ್ಟಿನ ಕಾರಣ ಈ ಶೈಕ್ಷಣಿಕ ವರ್ಷಕ್ಕೆ ಸೀಮಿತಗೊಳಿಸಿ ಶಾಲಾ–ಕಾಲೇಜು ನೋಂದಣಿ ನವೀಕರಣಕ್ಕೆ ರಾಜ್ಯ ಸರ್ಕಾರ ವಿಶೇಷ ವಿನಾಯಿತಿ ನೀಡಿದೆ.

‘2017-18ನೇ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳು ದಾಖಲೆಗಳನ್ನು ಸಲ್ಲಿಸಲು ಈ ವರ್ಷ ವಿನಾಯಿತಿ ನೀಡಲಾಗಿದೆ. ಕಳೆದ ಶೈಕ್ಷಣಿಕ ಸಾಲಿನ ದಾಖಲೆಗಳ ಆಧಾರದಲ್ಲಿ ನೋಂದಣಿ, ನವೀಕರಣ ನೀಡಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

‘ನವೀಕರಣದ ನೆಪದಲ್ಲಿ ಆರ್.ಟಿ.ಇ. ಹಣ ಮರುಪಾವತಿ ವಿಳಂಬ ಸೇರಿದಂತೆ ಅನವಶ್ಯಕ ಸಮಸ್ಯೆಗಳಿಗೆ ಕಾರಣವಾಗದಂತೆ ಕ್ರಮ ವಹಿಸಬೇಕು’ ಎಂದು ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.

ಹೆಚ್ಚುವರಿ ವಿಭಾಗ, ವಿಷಯ, ಭಾಷೆ ಮತ್ತು ಸಂಯೋಜನೆಗಳನ್ನು ಅನುಮತಿ ನೀಡುವ ಹಾಗೂ ನವೀಕರಿಸುವ ಸಂದರ್ಭದಲ್ಲಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕಾಗುತ್ತದೆ.

‘ಸುಪ್ರೀಂ ಕೋರ್ಟ್‌ನ ತೀರ್ಪಿನ ಅನ್ವಯ ವಿದ್ಯಾರ್ಥಿಗಳ ಸುರಕ್ಷತೆ, ಶಾಲಾ ಸುರಕ್ಷತೆ ನಿಯಮಗಳ ರಚನೆಗೆ ವಿಧಾನ ಪರಿಷತ್‌ ಸದಸ್ಯ ಎಸ್.ವಿ. ಸಂಕನೂರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಒಂದು ತಿಂಗಳಲ್ಲಿ ಶಾಲಾ ಸುರಕ್ಷತಾ ಕ್ರಮಗಳನ್ನು, ಇಲಾಖೆಯ ಇಲ್ಲಿಯವರೆಗಿನ ಆದೇಶಗಳು, ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲಿದೆ’ ಎಂದು ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು