ಮಂಗಳವಾರ, ಅಕ್ಟೋಬರ್ 27, 2020
28 °C

ಶೂನ್ಯ ವರ್ಷವೆಂದು ಘೋಷಿಸಿದರೂ ತಪ್ಪಿಲ್ಲ: ಹೊರಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಕೋವಿಡ್‌ 19 ಪರಿಣಾಮ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲಾಗುತ್ತಿದೆ. ಆದ್ದರಿಂದ ಈ ಸಾಲಿನ ಶೈಕ್ಷಣಿಕ ವರ್ಷವನ್ನು ಶೂನ್ಯ ವರ್ಷ ಎಂದು ಘೋಷಿಸಿದರೂ ತಪ್ಪಿಲ್ಲ’ ಎಂದು ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಪ್ರಾಣಕ್ಕಿಂತ ಯಾವುದೂ ದೊಡ್ಡದಲ್ಲ. ಶಾಲೆ ಆರಂಭದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಶಿಕ್ಷಣ ಸಚಿವರು ಜನಪ್ರತಿನಿಧಿಗಳಿಗೆ ಪತ್ರ ಬರೆದಿದ್ದಾರೆ. ನಾವು ನೀಡಿದ ಅಭಿಪ್ರಾಯವನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ. ಹೀಗಾದರೆ ಪತ್ರ ಬರೆಯುವುದಾದರೂ ಯಾಕೆ’ ಎಂದು ಪ್ರಶ್ನಿಸಿದರು.

‘ಕೊರೊನಾ ಸಂಪೂರ್ಣವಾಗಿ ಹೋಗುವ ತನಕ ಶಾಲಾ, ಕಾಲೇಜುಗಳನ್ನು ಪ್ರಾರಂಭಿಸಬಾರದು. ಶಿಕ್ಷಕರಿಗೆ ದಸರಾ ರಜೆ ರದ್ದು ಮಾಡಿದ್ದು ಸರಿಯಾದ ಕ್ರಮವಲ್ಲ. ಈಗಿನ ಪರಿಸ್ಥಿತಿಯಲ್ಲಿ ಶಿಕ್ಷಕರು ಮತ್ತು ಮಕ್ಕಳಿಗೆ ಸಾಧ್ಯವಾದಷ್ಟು ತಮ್ಮ ಮನೆಗಳಲ್ಲಿಯೇ ಇರಲು ಬಿಡಬೇಕು. ಇಷ್ಟೆಲ್ಲ ಹೇಳಿದ ಮೇಲೂ ಶಾಲೆ ಆರಂಭಿಸಿ ಸರ್ಕಾರ ತನ್ನ ಪ್ರತಿಷ್ಠೆ ಮುಂದುವರಿಸಿದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.