ಭಾನುವಾರ, ಮೇ 22, 2022
21 °C

ಎಲ್ಲ ತರಗತಿಗಳನ್ನು ಪ್ರಾರಂಭಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಶಾಲಾ–ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿ, 1ರಿಂದ ದ್ವಿತೀಯ ಪಿಯುಸಿವರೆಗಿನ ಎಲ್ಲ ತರಗತಿಗಳನ್ನು ಅಗತ್ಯ ಮುನ್ನೆಚ್ಚರಿಕೆಯೊಂದಿಗೆ ನಡೆಸಬೇಕು’ ಎಂದು ಸಾಂಸ್ಕೃತಿಕ ವಲಯದ ಪ್ರಮುಖರು ಹಾಗೂ ಸಾಹಿತಿಗಳು ಆಗ್ರಹಿಸಿದ್ದಾರೆ.

ಸರ್ಕಾರವು 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾಗಮ ಹಾಗೂ ಎಸ್ಸೆಸ್ಸೆಲ್ಸಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಅರ್ಧ ದಿನ ತರಗತಿಗಳನ್ನು ಪ್ರಾರಂಭಿಸಿದೆ. ಶಾಲೆಗಳನ್ನು ತೆರೆಯುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಕೋವಿಡ್‌ ಕಾರಣ ಶಾಲೆಗಳನ್ನು ಮುಚ್ಚಿದ ಪರಿಣಾಮ ರಾಜ್ಯದಲ್ಲಿ ಬಾಲ್ಯ ವಿವಾಹ, ಕಾರ್ಮಿಕ ಪದ್ಧತಿ, ಮಕ್ಕಳ ಸಾಗಣೆ ಹಾಗೂ ಭಿಕ್ಷಾಟನೆಯಂತಹ ಸಾಮಾಜಿಕ ಸಮಸ್ಯೆಗಳು ಹೆಚ್ಚಲಾರಂಭಿಸಿವೆ ಎಂದು ನ್ಯಾ.ಎಚ್‌.ಎನ್‌. ನಾಗಮೋಹನ್ ದಾಸ್, ಡಾ.ಜಿ. ರಾಮಕೃಷ್ಣ, ಕೆ. ಮರಳುಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಡಾ. ಸಿದ್ದನಗೌಡ ಪಾಟೀಲ, ವಸುಂದರಾ ಭೂಪತಿ, ವಿಜಯಾ, ಮಲ್ಲಿಕಾ ಘಂಟಿ, ಮಾವಳ್ಳಿ ಶಂಕರ್ ಸೇರಿದಂತೆ ಹಲವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕಳೆದ ಎರಡು ತಿಂಗಳಿಂದ ಮಕ್ಕಳು, ಪಾಲಕರು, ಎಸ್‌ಡಿಎಂಸಿ ಹಾಗೂ ವಿವಿಧ ಸಂಘಟನೆಗಳು ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯುವಂತೆ ನಿರಂತರವಾಗಿ ಅಭಿಯಾನ ನಡೆಸುತ್ತಿದ್ದಾರೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರವು ಮುಂಬರುವ ಸೋಮವಾರದಿಂದಲೇ ಎಲ್ಲ ತರಗತಿಗಳನ್ನು ಪ್ರಾರಂಭಿಸಿ, ಕಲಿಕೆಯ ಜತೆಗೆ ಬಿಸಿಯೂಟ ಮತ್ತು ಪೂರಕ ಮಾತ್ರೆಗಳನ್ನು ಒದಗಿಸಲು ಕ್ರಮವಹಿಸಬೇಕು. ಸರ್ಕಾರವು ತನ್ನ ಜವಾಬ್ದಾರಿಯ ಭಾಗವಾಗಿ ಇದನ್ನು ಆದ್ಯತೆಯ ವಿಷಯವನ್ನಾಗಿ ಪರಿಗಣಿಸಬೇಕು’ ಎಂದು ಆಗ್ರಹಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು