ಬೆಂಗಳೂರು ಬಿಟ್ಟು ಉಳಿದೆಡೆ ಶಾಲೆ ಕಾಲೇಜು ಆರಂಭ: ಬಿ.ಸಿ.ನಾಗೇಶ್

ಬೆಂಗಳೂರು: ಬೆಂಗಳೂರು ಬಿಟ್ಟು ಉಳಿದ ಎಲ್ಲ ಜಿಲ್ಲೆಗಳನ್ನು ಒಂದು ಘಟಕವಾಗಿ ಪರಿಗಣಿಸಿ ಶಾಲೆ–ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಬೆಂಗಳೂರಿನಲ್ಲಿ ಪ್ರಕರಣಗಳು ಅತಿ ಹೆಚ್ಚು ಇರುವುದರಿಂದ ರಜೆ ಮುಂದಿನ ಶುಕ್ರವಾರದವರೆಗೆ (ಜ.29)ಮುಂದುವರೆಯಲಿದೆ. ಮುಂದಿನ ಶುಕ್ರವಾರ ಮತ್ತೊಮ್ಮೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಉಳಿದ ಜಿಲ್ಲೆಗಳಲ್ಲಿ ಶಾಲೆಯನ್ನು ಒಂದು ಘಟಕವಾಗಿ ಪರಿಗಣಿಸಲಾಗುವುದು. ಇಲ್ಲಿ ಕೋವಿಡ್ ಪ್ರಕರಣ ಹೆಚ್ಚಾದರೆ ವಿಭಾಗಾಧಿಕಾರಿ, ತಹಶೀಲ್ದಾರರು, ಬಿಇಒ ಮತ್ತಿತ್ತರ ಅಧಿಕಾರಿಗಳು ಸೇರಿ ಆಯಾ ಶಾಲಾ–ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಪ್ರಕರಣ ಅತಿ ಹೆಚ್ಚು ಇದ್ದರೆ 7 ದಿನ ಮತ್ತು ಕಡಿಮೆ ಇದ್ದರೆ 3 ದಿನ ರಜೆ ನೀಡಲಾಗುವುದು. ಆ ದಿನಗಳು ಮುಗಿಯುತ್ತಿದ್ದಂತೆ ಮತ್ತೆ ಯಥಾ ಪ್ರಕಾರ ತರಗತಿಗಳು ಆರಂಭವಾಗುತ್ತವೆ ಎಂದು ನಾಗೇಶ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.