ಓಲೇಕಾರ ನೇಮಕ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್

ಬೆಂಗಳೂರು: ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ಎಸ್‌ಸಿಎಸ್‌ಟಿ) ಆಯೋಗದ ಅಧ್ಯಕ್ಷರನ್ನಾಗಿ ಹಾವೇರಿ ಶಾಸಕ ನೆಹರು ಓಲೇಕಾರ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿದೆ.
ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಅರ್ಜಿ ಸಲ್ಲಿಸಿದ್ದು, ‘ಕಾಯ್ದೆಯಲ್ಲಿ ಸೂಚಿಸಿರುವ ಅರ್ಹತೆಗಳನ್ನು ಖಚಿತಪಡಿಸಿಕೊಳ್ಳದೆ ನೇಮಕ ಮಾಡಲಾಗಿದೆ’ ಎಂದು ದೂರಿದ್ದಾರೆ.
‘ಇದು ರಾಜಕೀಯ ಉದ್ದೇಶದ ನೇಮಕವಾಗಿದೆ. ಆಯೋಗದ ಅಧ್ಯಕ್ಷರಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರ ವಿಷಯಗಳಿಗೆ ಸಂಬಂಧಿಸಿದ ವಿಶೇಷ ಜ್ಞಾನ ಇರಬೇಕು. ಆದರೆ, ಈ ಸಂಬಂಧ ಯಾವುದೇ ದಾಖಲೆಗಳನ್ನು ಓಲೇಕಾರ ಅವರು ಸಲ್ಲಿಸಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿತು. ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿತು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.