ಭಾನುವಾರ, ಸೆಪ್ಟೆಂಬರ್ 19, 2021
23 °C

ಈಶ್ವರಪ್ಪ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಹೊಡಿ, ಬಡಿ, ಕೊಲ್ಲು ಎಂಬುದಾಗಿ ಪ್ರಚೋದನಕಾರಿಯಾಗಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಬಂಧಿಸಬೇಕು’ ಎಂದು ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ.

ಭಾನುವಾರ ಶಿವಮೊಗ್ಗದಲ್ಲಿ ನಡೆದ ಸಭೆಯಲ್ಲಿ ಈಶ್ವರಪ್ಪ ನೀಡಿರುವ ಹೇಳಿಕೆ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಸ್‌ಡಿಪಿಐ ರಾಜ್ಯ ಘಟಕದ ಉಪಾಧ್ಯಕ್ಷ ಮಜೀದ್‌ ಖಾನ್‌, ‘ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆಗಳ ಮೂಲಕವೇ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಂಡು ಬಂದವರು. ಇತ್ತೀಚಿನ ದಿನಗಳಲ್ಲಿ ಕೋಮುಗಲಭೆಗೆ ಪ್ರಚೋದಿಸುವ, ಸೌಹಾರ್ದಕ್ಕೆ ಭಂಗ ತರುವ ಹೇಳಿಕೆಗಳನ್ನು ಹೆಚ್ಚಾಗಿ ನೀಡುತ್ತಿದ್ದಾರೆ. ಅವರ ಸಂಚಿಗೆ ಯುವಕರು ಬಲಿಯಾಗಬಾರದು’ ಎಂದು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು