ಬೆಂಗಳೂರು: ಕಾರು ಮತ್ತು ಜೀಪ್‌ಗಳಲ್ಲಿ ಪ್ರಯಾಣಿಸುವ ಹಿಂಬದಿ ಸವಾರರೂ ಇನ್ನು ಮುಂದೆ ಸೀಟ್ ಬೆಲ್ಟ್ ಧರಿಸಬೇಕು. ಇಲ್ಲದಿದ್ದರೆ ₹1 ಸಾವಿರ ದಂಡ ಬೀಳಲಿದೆ!
ಈ ಸಂಬಂಧ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸುತ್ತೋಲೆ ಹೊರಡಿಸಿದ್ದು, ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಎಲ್ಲಾ ವಲಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ಎಂ–1 ವಾಹನ ಎಂದರೆ ಚಾಲಕ ಹೊರತುಪಡಿಸಿ ಎಂಟು ಮತ್ತು ಅದಕ್ಕಿಂತ ಕಡಿಮೆ ಸೀಟುಗಳನ್ನು ಹೊಂದಿರುವ ವಾಹನಗಳಲ್ಲಿ ಮುಮ್ಮುಖವಾಗಿ ಇರುವ ಎಲ್ಲಾ ಸೀಟುಗಳಲ್ಲಿ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ. ಈ ನಿಯಮ ಕಡ್ಡಾಯವಾಗಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು ಎಂದೂ ಕೇಂದ್ರ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ. ಹಿಂಬದಿಯ ಸೀಟುಗಳಿಗೆ ಕವರ್
ಗಳನ್ನು ಅಳವಡಿಸುವಾಗ ಸೀಟ್ ಬೆಲ್ಟ್ ಲಾಕ್ ಮಾಡುವ ಮತ್ತು ಅನ್‌ಲಾಕ್ ಮಾಡುವ ಬಕಲ್‌ಗಳನ್ನು ಮುಚ್ಚದಂತೆ ನೋಡಿಕೊಳ್ಳಬೇಕು ಎಂದೂ ಸುತ್ತೋಲೆ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.