ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಗಲಭೆ: ಮೂರು ದಿನ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿ ನಿಷೇಧ

Last Updated 15 ಆಗಸ್ಟ್ 2022, 20:35 IST
ಅಕ್ಷರ ಗಾತ್ರ

ಶಿವಮೊಗ್ಗ: ಫ್ಲೆಕ್ಸ್ ಅಳವಡಿಕೆ ಹಿನ್ನೆಲೆಯಲ್ಲಿ ಆದ ಗಲಾಟೆ ಹಾಗೂ ಚೂರಿ ಇರಿತ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮುಂದಿನ ಮೂರು ದಿನಗಳ ಕಾಲ ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರರ ಓಡಾಟ ನಿಷೇಧಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

ನಗರದಲ್ಲಿ ಸೋಮವಾರ ತಡರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚೂರಿ ಇರಿತದಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಕ್ರಮಕ್ಕೆ ನಿರ್ಧರಿಸಲಾಗಿದೆ ಎಂದರು.

ಶಿವಮೊಗ್ಗದಲ್ಲಿ ಪದೇ ಪದೇ ಕೋಮು ಸೌಹಾರ್ದ ಕೆಡಿಸುವ ಘಟನೆಗಳು ನಡೆಯುತ್ತಿವೆ. ಆರೋಪಿಗಳು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದು, ಆರೋಪಿಗಳ ಆಸ್ತಿ ಮುಟ್ಟುಗೋಲಿನಂತಹ ಕ್ರಮಕ್ಕೂ ಚಿಂತನೆ ನಡೆಸಲಾಗಿದೆ ಎಂದರು.

ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪೂರ್ವ ವಲಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಪಡೆ ಕರೆಸಲಾಗುತ್ತಿದೆ. ಕ್ಷಿಪ್ರ ಕಾರ್ಯಾಚರಣೆ ಫ್ಲಟೂನ್ ಗಳು ಬರಲಿವೆ ಎಂದರು.

ಚೂರಿ ಇರಿತ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಯಾವುದಾದರೂ ಸಂಘಟನೆಗೆ ಸೇರಿದ್ದಾರೆಯೇ ಎಂಬುದನ್ನು ಈಗಲೇ ಹೇಳಲು ಆಗುವುದಿಲ್ಲ ಎಂದು ಎಡಿಜಿಪಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT