ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಪೂರಕ ಪರೀಕ್ಷೆ: 87 ಸಾವಿರ ಉತ್ತೀರ್ಣ

Last Updated 9 ಅಕ್ಟೋಬರ್ 2020, 19:47 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇ 41.28ರಷ್ಟು ಫಲಿತಾಂಶ ಬಂದಿದೆ.

ಒಟ್ಟು 2,12,678 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ1,29,989 ಬಾಲಕರು, 82,689 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಇವರಲ್ಲಿ 49,970 ಬಾಲಕರು ಹಾಗೂ 37,994 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಅಂದರೆ, ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇ 38.30ರಷ್ಟಿದ್ದರೆ, ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ 45.96ರಷ್ಟಿದೆ.

ಕಲಾ ವಿಭಾಗದಲ್ಲಿ ಶೇ 45.14, ವಾಣಿಜ್ಯ ವಿಭಾಗದಲ್ಲಿ ಶೇ 39.02 ಹಾಗೂವಿಜ್ಞಾನ ವಿಭಾಗದಲ್ಲಿ ಶೇ 37.45 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಇಲಾಖೆಯ ವೆಬ್‌ಸೈಟ್‌ www.karresults.nic.in ನಲ್ಲಿ ಫಲಿತಾಂಶ ಲಭ್ಯವಿದೆ.

ಮರುಮೌಲ್ಯಮಾಪನ:ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್‌ ಪ್ರತಿಗಾಗಿ ಅ.10ರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು, ಅ.16ರೊಳಗೆ ಸಲ್ಲಿಸಬೇಕು. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಯನ್ನು ಅ.14ರಿಂದ 19ರವರೆಗೆ www.pue.kar.nic.in ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ ಎಂದು ಇಲಾಖೆ ಹೇಳಿದೆ.

ಸ್ಕ್ಯಾನಿಂಗ್‌ ಪ್ರತಿಯನ್ನು ತೆಗೆದುಕೊಂಡವರಿಗೆ ಮಾತ್ರ ಮರುಮೌಲ್ಯಮಾಪನಕ್ಕೆ, ಅಂಕಗಳ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಈ ಅರ್ಜಿಗಳನ್ನು ಸಲ್ಲಿಸಲು ಅ.23 ಕೊನೆಯ ದಿನ.

ಸ್ಕ್ಯಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ ₹530 ಹಾಗೂ ಮೌರುಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ ₹1,670 ಶುಲ್ಕ ನಿಗದಿ ಮಾಡಲಾಗಿದೆ. ಅಂಕಗಳ ಮರುಎಣಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT