ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

Last Updated 25 ಏಪ್ರಿಲ್ 2021, 21:30 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಇದೇ 28 ರಿಂದ ಆರಂಭವಾಗಬೇಕಿದ್ದ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.

‘ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ತಕ್ಷಣ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಈ ಸಂದರ್ಭದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವೈಜ್ಞಾನಿಕ ನಿರ್ಧಾರವಾಗಿತ್ತು. ಪರೀಕ್ಷೆ ಮುಂದೂಡಿರುವುದು ಸೂಕ್ತವಾಗಿದೆ’ ಎಂದು ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT