ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.
ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಮಧ್ಯಾಹ್ನ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ ನಡೆಯಲಿದೆ. ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳಿಸಲಾಗುವುದು. ಕೇಂದ್ರ ಸಮಿತಿ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಕಟಿಸಲಿದೆ' ಎಂದರು.
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಜನರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.