ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತೆ ಶಶಿಪ್ರಭಾ ಹಿರೇಮಠ ನಿಧನ

Last Updated 12 ಮಾರ್ಚ್ 2021, 4:28 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಪತ್ರಕರ್ತೆ ಶಶಿಪ್ರಭಾ ಹಿರೇಮಠ (62) ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಸಮಾಚಾರ ಭಾರತಿ ಸುದ್ದಿ ಸಂಸ್ಥೆ, ಲೋಕವಾಣಿ, ಸಂಯುಕ್ತ ಕರ್ನಾಟಕ, ಸಂಜೆ ವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಶಶಿಪ್ರಭಾ ಕಾರ್ಯನಿರ್ವಹಿಸಿದ್ದರು. ಆಕಾಶವಾಣಿ, ಬೆಂಗಳೂರು ದೂರದರ್ಶನ ಮತ್ತು ‘ಸಿಟಿ ಕೇಬಲ್‌’ ಸುದ್ದಿ ವಾಹಿನಿಗಳಲ್ಲಿ ನಿರೂಪಕಿಯಾಗಿಯೂ ಕೆಲಸ ಮಾಡಿದ್ದರು. ಚಲನಚಿತ್ರ ಸೆನ್ಸಾರ್‌ ಮಂಡಳಿಯಲ್ಲಿ ನಾಲ್ಕು ವರ್ಷಗಳ ಕಾಲ ಸದಸ್ಯೆಯಾಗಿದ್ದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಹಾಗೂ ಬೆಂಗಳೂರು ಪ್ರೆಸ್‌ ಕ್ಲಬ್‌ನ ಪದಾಧಿಕಾರಿಯಾಗಿಯೂ ಆಯ್ಕೆಯಾಗಿದ್ದರು.

ಶಶಿಪ್ರಭಾ ಅವರಿಗೆ ಪತಿ ಮಲ್ಲಿಕಾರ್ಜುನಸ್ವಾಮಿ ಹಿರೇಮಠ ಮತ್ತು ಪುತ್ರಿ ಇದ್ದಾರೆ. ಸ್ವಗ್ರಾಮ ಸಕಲೇಶಪುರ ತಾಲ್ಲೂಕಿನ ಹೆಗ್ಗಡನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮೃತರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನರೆವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT