ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ: ಉಮೇಶ ಕತ್ತಿ

Last Updated 12 ಜುಲೈ 2021, 19:30 IST
ಅಕ್ಷರ ಗಾತ್ರ

ಧಾರವಾಡ: ‘ಉತ್ತರ ಕರ್ನಾಟಕದ ವಿಷಯದಲ್ಲಿ ತಾರತಮ್ಯ ನೀತಿ ಅನುಸರಿಸಿದರೆ ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುವುದು ಅನಿವಾರ್ಯ’ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿದರು.

ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭಕ್ಕೂ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉತ್ತರ ಕರ್ನಾಟಕವನ್ನು ಪ್ರತ್ಯೇಕಗೊಳಿಸುವುದು ಒಂದು ದಿನದ ಕೆಲಸವೇನೂ ಅಲ್ಲ. ಆದರೆ ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ’ ಎಂದರು.

‘ನಾನು ಎಂಟು ಸಲ ಶಾಸಕನಾದವನು. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೂ ಇದೆ. ಈ ಬಾರಿ ಉತ್ತರ ಕರ್ನಾಟಕದವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT