ಬೆಂಗಳೂರು: ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ.

ವಿಶ್ವೇಶ್ವರಯ್ಯ ಜಲ ನಿಗಮದ ನಿರ್ದೇಶಕ ಮಂಡಳಿ ಸಭೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ಎತ್ತಿನಹೊಳೆ ಯೋಜನೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬೊಮ್ಮಾಯಿ, ಸೆಪ್ಟೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ತಾಕೀತು ಮಾಡಿದರು ಎಂದು ಮೂಲಗಳು ತಿಳಿಸಿವೆ.

ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕುರಿತು ನಿಗಮದ ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು. ತಕ್ಷಣ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವಂತೆ ಸೂಚಿಸಿದ ಮುಖ್ಯಮಂತ್ರಿ, ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು ಎಂಬ ಮಾಹಿತಿ ಲಭ್ಯವಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆಯೂ ನಡೆಯಿತು. ವಾಣಿ ವಿಲಾಸ ಸಾಗರದಲ್ಲಿ 27 ಟಿಎಂಸಿ ಅಡಿ ನೀರು ಸಂಗ್ರಹ ಇರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ಆ ಭಾಗದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆಯೂ ವಿವರ ನೀಡಿದರು.

ಭದ್ರಾ ಮೇಲ್ದಂಡೆ ಯೋಜನೆ ನೀರನ್ನು ಬಳಸಿಕೊಂಡು ಕೆರೆಗಳನ್ನು ತುಂಬಿಸುವ ₹ 48 ಕೋಟಿ ವೆಚ್ಚದ ಕಾಮಗಾರಿಗಳ ಆರಂಭಕ್ಕೆ ನಿರ್ದೇಶಕ ಮಂಡಳಿ ಒಪ್ಪಿಗೆ ನೀಡಿದೆ ಎಂದು ಮೂಲಗಳು ಹೇಳಿವೆ.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ ರಾವ್ ಪೇಶ್ವೆ ಮತ್ತು ಇತರ ನಿರ್ದೇಶಕರು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.