ಮಂಗಳವಾರ, ಸೆಪ್ಟೆಂಬರ್ 28, 2021
26 °C

ಅಲಯನ್ಸ್‌ ವಿವಿ ಗೌರವ ಡಾಕ್ಟರೇಟ್ ಅಧಿಕೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಲಯನ್ಸ್‌ ವಿಶ್ವವಿದ್ಯಾಲಯವು ನೀಡುವ ಗೌರವ ಡಾಕ್ಟರೇಟ್‌ ಪದವಿಯು ಅಧಿಕೃತ ಎಂದು ಉನ್ನತ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. 

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್‌ ಅವರ ಪ್ರಶ್ನೆಗೆ ಉತ್ತರ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ‘ಅಲಯನ್ಸ್‌ ವಿಶ್ವವಿದ್ಯಾಲಯವು ರಾಜ್ಯ ಶಾಸನದ ಮೂಲಕ ಖಾಸಗಿ ವಿಶ್ವವಿದ್ಯಾಲಯವಾಗಿ ಸ್ಥಾಪಿತವಾಗಿದೆ. ಅದು ಗೌರವ ಡಾಕ್ಟರೇಟ್ ಪದವಿ ನೀಡಲು ಅರ್ಹವಾಗಿದೆ’ ಎಂದು ಹೇಳಿದ್ದಾರೆ. 

ವಿಶ್ವವಿದ್ಯಾಲಯವು ಅಕ್ರಮವಾಗಿ ಗೌರವ ಡಾಕ್ಟರೇಟ್‌ ನೀಡಿದ ದೂರುಗಳಿದ್ದು, ಯಾವುದೇ ತನಿಖೆ ನಡೆಸಿ ಕ್ರಮ ಕೈಗೊಳ್ಳದಿರಲು ಕಾರಣವೇನು ಎಂದು ವಿಶ್ವನಾಥ್ ಪ್ರಶ್ನಿಸಿದ್ದರು. 

‘ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಾಗಲಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳಾಗಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವ ಪ್ರಕ್ರಿಯೆಯಲ್ಲಿ ಸರ್ಕಾರದ ಪಾತ್ರವಿರುವುದಿಲ್ಲ. ಆದರೆ, ವಿಶ್ವವಿದ್ಯಾಲಯದ ನಿಯಮಗಳನ್ವಯವೇ ಈ ಪ್ರಕ್ರಿಯೆ ನಡೆಸಬೇಕು. ಕಳಂಕಿತ  ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡುವ ಮುನ್ನ, ಈ ವಿಷಯವನ್ನು ಖಚಿತಪಡಿಸಿಕೊಳ್ಳುವುದು ಅಲಯನ್ಸ್‌ ವಿಶ್ವವಿದ್ಯಾಲಯದ ಕರ್ತವ್ಯ. ಸರ್ಕಾರದ ಹಂತದಲ್ಲಿ ಯಾವುದೇ ಕ್ರಮ ಇರುವುದಿಲ್ಲ’ ಎಂದು ಸರ್ಕಾರ ಹೇಳಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು