ಬೆಂಗಳೂರು: ‘ಬಿಡಿಎ, ಬಿಬಿಎಂಪಿ ಸೇರಿದಂತೆ ಸಾರ್ವಜನಿಕ ಆಸ್ತಿ ಸಂರಕ್ಷಣೆಗೆ ಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸುವಲ್ಲಿ ವಿಫಲತೆ ಕಾಣುತ್ತಿದ್ದೇವೆ. ಆಸ್ತಿಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ದೇವರ ಚಿಕ್ಕನಹಳ್ಳಿ ಬಳಿ ನಿರ್ಮಿಸಿದ ಬಿಡಿಎ ಬಡಾವಣೆ ನಿವೇಶನಗಳ ಹಂಚಿಕೆ ರದ್ದು ಮಾಡಲು ಅವಕಾಶ ಕೊಡುವುದಿಲ್ಲ. ಭೂಸ್ವಾಧೀನ, ಬಡಾವಣೆ ನಿರ್ಮಾಣದ ವಿಷಯದಲ್ಲಿ ಹಲವು ನ್ಯೂನತೆಗಳು ಪತ್ತೆಯಾಗಿವೆ. ಅಧಿಕಾರಿಗಳು ಕೋರ್ಟ್‌ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಖಾಸಗಿಯವರ ಜತೆ ಶಾಮೀಲಾದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.