ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪನೆ

Last Updated 18 ಡಿಸೆಂಬರ್ 2022, 12:42 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಗಳ (ಎಸ್‌ಟಿ) ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದ ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ’ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹೊಸ ನಿಗಮಕ್ಕೆ ಒಟ್ಟು 8 ಹುದ್ದೆಗಳನ್ನು ಸೃಜಿಸಲಾಗಿದೆ. ಈ ಪೈಕಿ, ವ್ಯವಸ್ಥಾಪಕ ನಿರ್ದೇಶಕರು, ಕಂಪನಿ ಸೆಕ್ರಟರಿ, ಲೆಕ್ಕಾಧಿಕಾರಿ, ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನಿಯೋಜನೆ ಮೂಲಕ ಹಾಗೂ ಇಬ್ಬರು ಡಾಟಾ ಎಂಟ್ರಿ, ವಾಹನ ಚಾಲಕ, ಗ್ರೂಪ್‌ ‘ಡಿ’ ನೌಕರರನ್ನು ಹೊರಗುತ್ತಿಗೆಯಲ್ಲಿ ನೇಮಿಸಿಕೊಳ್ಳಲಾಗುವುದು ಎಂದೂ ಆದೇಶದಲ್ಲಿದೆ.

2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿಯ 6,65,377 ಮತ್ತು ಪರಿಶಿಷ್ಟ ಪಂಗಡದ 3,25,807 ಸೇರಿ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಒಟ್ಟು 9,91,184 ಜನಸಂಖ್ಯೆ ಇದೆ. ಈ ಸಮುದಾಯಕ್ಕೆ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದೇ ಅ. 8ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ನಿಗಮ ಸ್ಥಾಪಿಸಲು ನಿರ್ಣಯ ಕೈಗೊಳ್ಳಲಾಗಿತ್ತು.

ಈ ಸಮುದಾಯದ ಜನರ ಅಭಿವೃದ್ಧಿ ಯೋಜನೆಗಳನ್ನು ಸದ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT