ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಪ್ಪರ್–ಆಟೊ ನಡುವೆ ಭೀಕರ ಅಪಘಾತ: 7 ಮಹಿಳೆಯರು ಸಾವು

Last Updated 4 ನವೆಂಬರ್ 2022, 18:16 IST
ಅಕ್ಷರ ಗಾತ್ರ

ಚಿಟಗುಪ್ಪ/ಬೀದರ್‌: ಚಿಟಗುಪ್ಪ ತಾಲ್ಲೂಕಿನ ಬೆಮಳಖೇಡಾ ಗ್ರಾಮದ‌ ಸರ್ಕಾರಿ ಶಾಲೆ ಎದುರು ಶುಕ್ರವಾರ ಸಂಜೆ 6ರ ಸುಮಾರಿಗೆ ಟಿಪ್ಪರ್ ಮತ್ತು ಆಟೊ ನಡುವೆ ಭೀಕರ ಅಪಘಾತ ಸಂಭವಿಸಿ, ಆಟೊದಲ್ಲಿದ್ದ ಏಳು ಮಹಿಳೆಯರು ಮೃತಪಟ್ಟಿದ್ದಾರೆ.

ಚಿಟಗುಪ್ಪ ತಾಲ್ಲೂಕಿನ ಉಡುಬನಳ್ಳಿ ಗ್ರಾಮದ ಪ್ರಭಾವತಿ ದೇವೇಂದ್ರ (36), ಯಾದಮ್ಮ ಅಷ್ಮಿತ (40), ಗುಂಡಮ್ಮಾ ನರಸಿಂಗ (60), ಜಗಮ್ಮಾ ಪ್ರಭು (34), ರುಕ್ಮಿಣಿಬಾಯಿ ಅಮೃತ (60), ಈಶ್ವರಮ್ಮ ಬಕ್ಕಪ್ಪ (55) ಮತ್ತುಪಾರ್ವತಿ ಮಾರುತಿ (42) ಮೃತರು. ಎಲ್ಲರೂ ಕೃಷಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ಈ ಅವಘಡ ಸಂಭವಿಸಿದೆ.

ಆಟೊ ಚಾಲಕ ಉಡಬನಳ್ಳಿಯ ಜಗನ್ನಾಥ ಸಿದ್ದಪ್ಪ ನಾಟೇಕಾರ (39) ಮತ್ತು ಟಿಪ್ಪರ್ ಚಾಲಕ ಅಶೋಕ ರಾಜಪ್ಪ ಸೇರಿ 11 ಮಂದಿಗೆ ಗಾಯಗಳಾಗಿವೆ ಎಂದು ಬೆಮಳಖೇಡಾ ಠಾಣೆ ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣದ ನೋಂದಣಿ ಹೊಂದಿದ ಲಾರಿಯು ಮತ್ತು ಆಂಧ್ರ ಪ್ರದೇಶದ ನೋಂದಣಿ ಹೊಂದಿದ ಆಟೊ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿ ಒಬ್ಬರು ಸಾವನ್ನಪ್ಪಿದರೆ, ತೀವ್ರ ಸ್ವರೂಪದಲ್ಲಿ ಗಾಯಗೊಂಡ 6 ಮಂದಿ ಆಸ್ಪತ್ರೆಯಲ್ಲಿ ಕೊನೆಯುಸಿ
ರೆಳೆದರು.

‘ಅಪಘಾತ ನಡೆದ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಟೊದಲ್ಲಿ ಒಟ್ಟು 17 ಮಂದಿ ಪ್ರಯಾಣಿಕರು ಇದ್ದರು. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಒಬ್ಬರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT