ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ ಆರೋಪ: ನೋಟಿಸ್ ರದ್ದು

Last Updated 21 ಜುಲೈ 2021, 19:25 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿರುವ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರಿಗೆ ನೀಡಿದ್ದ ಎರಡನೇ ನೋಟಿಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಸೇವಾ ನಿಯಮಗಳ ಅಡಿಯಲ್ಲಿನ ವಿಧಾನಗಳನ್ನು ಅನುಸರಿಸದೆ ಎರಡನೇ ನೋಟಿಸ್ ನೀಡಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಅರ್ಥಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಅರ್ಜಿದಾರರ ವಿರುದ್ಧ 2018ರಲ್ಲಿ ಬಂದಿದ್ದ ದೂರನ್ನು ಕೆಲಸದ ಸ್ಥಳದಲ್ಲಿ ಮಹಿಳೆಯ ಮೇಲಿನ ಲೈಂಗಿಕ ಕಿರುಕುಳ(ನಿಷೇಧ) ಕಾಯ್ದೆ–2013 ಅಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ತನಿಖೆ ನಡೆಸಲು ವಿಶ್ವವಿದ್ಯಾಲಯವು ಸಮಿತಿಯನ್ನು ನೇಮಕ ಮಾಡಿತ್ತು. ಸಮಿತಿ ನೀಡಿದ ವರದಿ ಆಧರಿಸಿ ಸಿಂಡಿಕೇಟ್‌ ಸಮಿತಿಯು ಎರಡನೇ ನೋಟಿಸ್‌ ನೀಡುವ ಮುನ್ನವೇ ಅಮಾನತುಗೊಳಿಸಿತು.

‘ಎರಡನೇ ನೋಟಿಸ್‌ನಲ್ಲಿ ಸೇವೆಯಿಂದ ವಜಾಗೊಳಿಸುವ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಪ್ರಾಧ್ಯಾಪಕರನ್ನು ವಜಾಗೊಳಿಸಲು ನಿಗದಿಪಡಿಸಿರುವ ನಿಯಮಗಳನ್ನು ಅನುಸರಿಸಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಹೇಳಿದೆ. ಆಂತರಿಕ ದೂರುಗಳ ಸಮಿತಿಯ ವರದಿ ಆಧರಿಸಿ ವಿಚಾರಣೆ ಮುಕ್ತಾಯಗೊಳಿಸುವುದು ಕಾನೂನು ಬಾಹಿರ ಎಂಬ ಸುಪ್ರೀಂ ಕೋರ್ಟ್‌ ಆದೇಶವನ್ನು ಪೀಠ ಉಲ್ಲೇಖಿಸಿತು.

ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯ ಮಹಿಳಾ ಆಯೋಗಕ್ಕೆ ವಿದ್ಯಾರ್ಥಿನಿಯೊಬ್ಬರು ನೀಡಿದ್ದ ದೂರನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆಯೋಗವು ಸೂಚಿಸಿ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT