ಭಾನುವಾರ, ಏಪ್ರಿಲ್ 2, 2023
33 °C

‘ಬಸವ ಭೂಷಣ’ ಪ್ರಶಸ್ತಿ ವಾಪಸ್‌ಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶರಣರು ನೀಡಿದ್ದ ‘ಬಸವ ಭೂಷಣ’ ಪ್ರಶಸ್ತಿಯನ್ನು ವಾಪಸ್‌ ನೀಡಬೇಕು ಎಂದು ನೈಜ ಹೋರಾಟಗಾರರ ವೇದಿಕೆಯ ಎಚ್‌.ಎಂ. ವೆಂಕಟೇಶ್‌ ಅವರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ‘ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಶಿವಮೂರ್ತಿ ಶರಣರು ಸಂಸ್ಕೃತಿ ಉತ್ಸವದಲ್ಲಿ ನೀಡಿದ್ದ ಪ್ರಶಸ್ತಿಯನ್ನು ವಾಪಸ್‌ ನೀಡಿ ನಾಡಿನ ಘನತೆ ಮತ್ತು ಗೌರವ ಕಾಪಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಜತೆಗೆ, ಅತ್ಯಾಚಾರದ ಕೃತ್ಯವೆಸಗಿರುವ ಆರೋಪಿಯ ಕೈಯಿಂದ ಪ್ರಶಸ್ತಿ ಪಡೆದವರು ಸಹ ವಾಪಸ್‌ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು