ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ. ಪ್ರಕರಣ: ವಿಚಾರಣೆಗೆ ಹಾಜರಾದ ರಮೇಶ ಜಾರಕಿಹೊಳಿ

Last Updated 29 ಮಾರ್ಚ್ 2021, 5:19 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ಯುವತಿ ನೀಡಿದ್ದ ದೂರು ಆಧರಿಸಿ ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡಿದ್ದು, ಅದರ ವಿಚಾರಣೆಗೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸೋಮವಾರ ಬೆಳಿಗ್ಗೆ ಹಾಜರಾಗಿದ್ದಾರೆ.

'ಕೆಲಸ‌ ಕೊಡಿಸುವುದಾಗಿ ಆಮಿಷವೊಡ್ಡಿದ್ದ ರಮೇಶ ಜಾರಕಿಹೊಳಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ' ಎಂದು ಆರೋಪಿಸಿ ಯುವತಿ ವಕೀಲರ ಮೂಲಕ ಲಿಖಿತ ರೂಪದಲ್ಲಿ ದೂರು ನೀಡಿದ್ದರು.

ಅದರನ್ವಯ ಕಬ್ಬನ್‌ಪಾರ್ಕ್ ಠಾಣೆ‌ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆದರೆ, ಈ ಪ್ರಕರಣದ ‌ತನಿಖೆ ಜವಾಬ್ದಾರಿ ಎಸ್ಐಟಿಗೆ ಹಸ್ತಾಂತರವಾಗಿಲ್ಲ.

ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಕಬ್ಬನ್ ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್, ವಿಚಾರಣೆಗೆ ಬರುವಂತೆ ರಮೇಶ ಜಾರಕಿಹೊಳಿ ಅವರಿಗೆ ಭಾನುವಾರ ನೋಟಿಸ್ ನೀಡಿದ್ದರು.

ನೋಟಿಸ್ ಸ್ವೀಕರಿಸಿದ್ದ ರಮೇಶ, ಆಡುಗೋಡಿಯಲ್ಲಿರುವ ವಿಶೇಷ ವಿಚಾರಣಾ ಕೊಠಡಿಗೆ ಬಂದಿದ್ದಾರೆ. ಇನ್‌ಸ್ಪೆಕ್ಟರ್ ಅವರು ವಿಚಾರಣೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT