ಹುಬ್ಬಳ್ಳಿ: 'ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣದ ಕುರಿತು ಎಲ್ಲ ವಿಧದಲ್ಲೂ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರಿಂದಲೂ ಒತ್ತಡ ಬಂದಿಲ್ಲ' ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಪೋಷಕರನ್ನು ಸಹ ಸಂಪರ್ಕಿಸಿ, ಮಾಹಿತಿ ಸಂಗ್ರಹಿಸಲು ಮುಂದಾಗಿದ್ದೇವೆ. ಫೋಕ್ಸೊ ಕಾಯ್ದೆಯಡಿಯ ತನಿಖೆ ಮುಂದುವರಿದಿದೆ' ಎಂದರು.
ಇದನ್ನೂ ಓದಿ:ಶಿವಮೂರ್ತಿ ಮುರುಘಾ ಶರಣರ ಪ್ರಯಾಣಕ್ಕೆ ಪೊಲೀಸರ ತಡೆ
'ಕೆಲವು ಮಾಧ್ಯಮಗಳಲ್ಲಿ ಮುರುಘಾ ಶ್ರೀಗಳ ಬಂಧನದ ಕುರಿತು ಮಾಹಿತಿ ಬರುತ್ತಿವೆ. ಬಂಧನವಾಗಿದ್ದರೆ ನನಗೆ ಮಾಹಿತಿ ದೊರೆಯುತ್ತಿತ್ತು. ಆದರೆ, ಈವರೆಗೆ ಅಂತಹ ಯಾವುದೇ ಮಾಹಿತಿ ದೊರಕಿಲ್ಲ. ಮಾಧ್ಯಮಕ್ಕೆ ಅರ್ಧಮರ್ಧ ಮಾಹಿತಿ ನೀಡಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ತನಿಖಾ ಹಂತದಲ್ಲಿ ಯಾವುದೇ ಮಾಹಿತಿ ನೀಡಬಾರದು ಎಂದು ಕೋರ್ಟ್ ಆದೇಶ ಸಹ ಇದೆ' ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.