ಶನಿವಾರ, ಏಪ್ರಿಲ್ 17, 2021
24 °C

ಎಲ್ಲ ತರಗತಿಗಳನ್ನು ಆರಂಭಿಸಿ: ಎಸ್‌ಎಫ್‌ಐ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘6ರಿಂದ 9ನೇ ತರಗತಿಗಳನ್ನು ಸ್ಥಗಿತಗೊಳಿಸಿರುವುದು ಅವೈಜ್ಞಾನಿಕ ತೀರ್ಮಾನ. ಇದನ್ನು ಸರ್ಕಾರ ಕೂಡಲೇ  ಹಿಂಪಡೆಯಬೇಕು’ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಆಗ್ರಹಿಸಿದೆ.

‘ಕೋವಿಡ್‌ನಿಂದ ವಿದ್ಯಾರ್ಥಿಗಳಿಗೆ ಪರಿಣಾಮ ಬೀರುವುದಿಲ್ಲ ಎಂದು ವೈದ್ಯಕೀಯ ವರದಿಗಳು ತಿಳಿಸಿವೆ. ಶಾಲೆ ಮುಚ್ಚಿರುವುದರಿಂದ ಮಕ್ಕಳು ಬಾಲಕಾರ್ಮಿಕ, ಬಾಲ್ಯವಿವಾಹ, ಅಪೌಷ್ಟಿಕತೆಗೆ ಒಳಗಾಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವುದು ಬೇಡ. ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕು. ಎಲ್ಲ ಹಂತದ ತರಗತಿಗಳನ್ನು ಈ ಕೂಡಲೇ ಪ್ರಾರಂಭಿಸಬೇಕು’ ಎಂದು ಒತ್ತಾಯಿಸಿದೆ.

‘ಕೋವಿಡ್ ತಡೆಗೆ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಶಾಲೆ ಬಿಟ್ಟಿರುವ ಮಕ್ಕಳ ರಕ್ಷಣೆಗಾಗಿ ತುರ್ತು ಸಮೀಕ್ಷೆ ಆಗಬೇಕು. ಶಾಲೆ ತೆರೆಯುವ ವಿಚಾರದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಹಾಗೂ ಆತಂಕ ಉಂಟು ಮಾಡುವುದನ್ನು ಸರ್ಕಾರ ನಿಲ್ಲಿಸಬೇಕು’ ಎಂದೂ ತಿಳಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.