ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮು ದ್ವೇಷ ಹರಡುವವರ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್.ಜಿ.ಸಿದ್ದರಾಮಯ್ಯ ರಾಜೀನಾಮೆ

Last Updated 30 ಮೇ 2022, 11:59 IST
ಅಕ್ಷರ ಗಾತ್ರ

ಬೆಂಗಳೂರು: ಕೋಮು ದ್ವೇಷವನ್ನು ರಾಜಾರೋಷವಾಗಿ ಹರಡುತ್ತಾ ಆಟಾಟೋಪ ಮಾಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ‘ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷ ಸ್ಥಾನಕ್ಕೆ ಎಸ್.ಜಿ. ಸಿದ್ದರಾಮಯ್ಯ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಜತೆಗೆ ಸದಸ್ಯರಾದ ಎಚ್.ಎಸ್. ರಾಘವೇಂದ್ರ ರಾವ್, ನಟರಾಜ ಬೂದಾಳು, ಚಂದ್ರಶೇಖರ ನಂಗಲಿ ಸಹ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಅವರು ಪತ್ರ ಬರೆದಿದ್ದಾರೆ.

‘ತಮಗೆ ಗೌರವಪೂರ್ವಕ ನಮಸ್ಕಾರಗಳು. ನಮ್ಮ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಾಂವಿಧಾನಿಕ ದಬ್ಬಾಳಿಕೆಗಳನ್ನು ಕಂಡು ಆತಂಕ, ಭಯ ಉಂಟಾಗಿದೆ. ಕೋಮು ದ್ವೇಷವನ್ನು ರಾಜಾರೋಷವಾಗಿ ಮಾತನಾಡುತ್ತಾ ಆಟಾಟೋಪ ಮೆರೆಯುತ್ತಾ ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ ಸರ್ಕಾರ ಮೌನವಹಿಸಿರುವುದು ಇನ್ನೂ ಹೆಚ್ಚಿನ ಆತಂಕ, ಭಯ ಉಂಟು ಮಾಡುತ್ತಿದೆ. ಈ ಎಲ್ಲ ಬೆಳವಣಿಗೆಗಳಿಂದ ಬೇಸತ್ತು ನಾವು ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು ನಮ್ಮ ರಾಜೀನಾಮೆ ಒಪ್ಪಿಕೊಂಡು ಈ ಕೂಡಲೇ ನಮ್ಮನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕೆಂದು ವಿನಂತಿಸುತ್ತೇವೆ’ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಮತ್ತು ಇತರರು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT