ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ರಾಜ್‌ಕುಮಾರ್ ವಿರುದ್ಧ ವಿವಾದಿತ ಹೇಳಿಕೆ: ಕ್ಷಮೆಯಾಚಿಸಿದ ಶಾಸಕ ಹ್ಯಾರಿಸ್

Last Updated 17 ಫೆಬ್ರುವರಿ 2021, 15:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಕಾಂಗ್ರೆಸ್ ಮುಖಂಡ ಎನ್ ಎ ಹ್ಯಾರಿಸ್, ಡಾ. ರಾಜ್‌ಕುಮಾರ್ ಪ್ರತಿಮೆ ಸ್ಥಾಪನೆ ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಳಿಕ ಫೇಸ್‌ಬುಕ್ ಲೈವ್ ವಿಡಿಯೋದಲ್ಲಿ ಶಾಸಕ ಹ್ಯಾರಿಸ್ ಜನತೆಯ ಕ್ಷಮೆಯಾಚಿಸಿದ್ದಾರೆ.

ಮಂಗಳವಾರ, ಫೆ. 16ರಂದು ಬೆಂಗಳೂರಿನ ದೊಮ್ಮಲೂರು ಪ್ರದೇಶದಲ್ಲಿ ವಿವಿಧ ಕಾಮಗಾರಿ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ವರನಟ ಡಾ. ರಾಜ್‌ಕುಮಾರ್ ಕುರಿತು ವಿವಾದಿತ ಹೇಳಿಕೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ರಾಜ್‌ ಕುರಿತ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಲೇ ಬುಧವಾರ, ಫೆ. 17ರಂದು ಸಂಜೆ ಫೇಸ್‌ಬುಕ್ ಲೈವ್ ಮೂಲಕ ಶಾಸಕ ಹ್ಯಾರಿಸ್ ಕ್ಷಮೆಯಾಚಿಸಿದ್ದಾರೆ.

ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ, ನಾನು ರಾಜ್‌ಕುಮಾರ್ ಅಭಿಮಾನಿಯಾಗಿದ್ದು, ನನ್ನ ಹೇಳಿಕೆಯನ್ನು ತಿರುಚಿ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ಶಾಸಕ ಹ್ಯಾರಿಸ್ ಹೇಳಿಕೊಂಡಿದ್ದಾರೆ. ಅಲ್ಲದೆ, ಪ್ರತಿಮೆ ಸ್ಥಾಪನೆಗೆ ತಾನೂ ಕೂಡ ಶ್ರಮಿಸಿದ್ದು, ರಾಜ್‌ಕುಮಾರ್ ಅಭಿಮಾನಿಯಾಗಿದ್ದೇನೆ, ಈ ವಿಚಾರದಲ್ಲಿ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ, ಈ ಸಂಗತಿಯನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಹ್ಯಾರಿಸ್ ಫೇಸ್‌ಬುಕ್ ಲೈವ್‌ನಲ್ಲಿ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT