ಶರತ್ ವರ್ಗಾವಣೆ: ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಡಿ.22ಕ್ಕೆ ಮುಂದೂಡಿದೆ.
ಬಿ.ಶರತ್ ಅವರ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ನಿಯೋಜಿಸಿರುವ ಕ್ರಮವನ್ನು ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸಮರ್ಥಿಸಿಕೊಂಡರು. ಮುಂದಿನ ವಿಚಾರಣೆಯನ್ನು ಡಿ.22ಕ್ಕೆ ಪೀಠ ನಿಗದಿಪಡಿಸಿತು.
ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದ ಬಿ.ಶರತ್ ಅವರನ್ನು ಒಂದೇ ತಿಂಗಳಲ್ಲಿ ಬೇರೆಡೆಗೆ ವರ್ಗಾಯಿಸಿ ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ಸೆಪ್ಟೆಂಬರ್ 27ರಂದು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಶರತ್ ಸಿಎಟಿಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.