ಬುಧವಾರ, ನವೆಂಬರ್ 25, 2020
26 °C

ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ ಹಾದಿ ಸುಗಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಹೊಸಕೋಟೆಯ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲು ತಾಲ್ಲೂಕು ಕಾಂಗ್ರೆಸ್‌ ಘಟಕ ಬುಧವಾರ ಒಮ್ಮತದಿಂದ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಶರತ್‌ ಕಾಂಗ್ರೆಸ್‌ ಸೇರ್ಪಡೆಯ ಹಾದಿ ಸುಗಮವಾದಂತಾಗಿದೆ. 

‘ಹೊಸಕೋಟೆಯಲ್ಲಿ ಬುಧವಾರ ನಡೆದ ತಾಲ್ಲೂಕು ಕಾಂಗ್ರೆಸ್ ಸಭೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಶೀಘ್ರ ಕೆಪಿಸಿಸಿಗೆ ವರದಿ ಸಲ್ಲಿಸಲಾಗುವುದು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುನಿಶಾಮಣ್ಣ ತಿಳಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಶರತ್‌ ಬಚ್ಚೇಗೌಡ ಅವರು ತಮ್ಮ ರಾಜಕೀಯ ಎದುರಾಳಿ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್‌ ವಿರುದ್ಧ ಜಯ
ಗಳಿಸಿದ್ದರು.

ಚಿಕ್ಕಬಳ್ಳಾಪುರದ ಬಿಜೆಪಿ ಸಂಸದರಾಗಿರುವ ಶರತ್‌ ತಂದೆ ಬಿ.ಎನ್‌. ಬಚ್ಚೇಗೌಡ ಕೂಡ ಮಗನ ಕಾಂಗ್ರೆಸ್‌ ಸೇರ್ಪಡೆಗೆ ಹಸಿರು ನಿಶಾನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು