ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಾವತಿ ಸಂತ್ರಸ್ತರಿಗೆ ಡಿಸೆಂಬರ್ ಒಳಗೆ ಹಕ್ಕುಪತ್ರ: ಬೊಮ್ಮಾಯಿ

Last Updated 27 ನವೆಂಬರ್ 2022, 12:29 IST
ಅಕ್ಷರ ಗಾತ್ರ

ಶಿವಮೊಗ್ಗ: ಕೇಂದ್ರದ ಅನುಮತಿ ಪಡೆದು ಡಿಸೆಂಬರ್ ಅಂತ್ಯದೊಳಗೆ ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹರಿಸಿ ಎಲ್ಲರಿಗೂ ಹಕ್ಕುಪತ್ರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ತೀರ್ಥಹಳ್ಳಿಯಲ್ಲಿ ಭಾನುವಾರ ₹618 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

'ಶರಾವತಿ ಸಂತ್ರಸ್ತರ ಸಮಸ್ಯೆ ಬಹಳ ವರ್ಷಗಳಿಂದ ಇದೆ. ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮುನ್ನವೇ ಈ ಸಮಸ್ಯೆ ಪರಿಹರಿಸಬಹುದಾಗಿತ್ತು. ಆಗ ಈ ಬಗ್ಗೆ ಚಿಂತನೆ ನಡೆಸದೇ ರಾಜಕಾರಣ ಮಾಡಿಕೊಂಡು ಬಂದವರು, ಇವತ್ತು ಅದನ್ನೇ ಮಾಡುತ್ತಿದ್ದಾರೆ. ಸಂತ್ರಸ್ತರು ಸಮಸ್ಯೆಯೊಂದಿಗೆ ಜೀವಿಸುವಂತೆ ಮಾಡಿ ರಾಜಕೀಯ ಬೇಳೆ೬ ಬೇಯಿಸಿಕೊಳ್ಳುತ್ತಿದ್ದಾರೆ. ಒಂದೇ ಸಮಸ್ಯೆ ಇಟ್ಟುಕೊಂಡು ಎಷ್ಟು ಬಾರಿ ರಾಜಕೀಯ ಲಾಭ ಪಡೆಯುತ್ತೀರಿ' ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಅರಣ್ಯ ಸಂರಕ್ಷಣೆ ಕಾಯ್ದೆಯಡಿ ಕೇಂದ್ರದ ಅನುಮತಿ ಪಡೆಯದೇ ಶರಾವತಿ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಮಾಡಿದ್ದ ಅರಣ್ಯ ಭೂಮಿ ಮಂಜೂರಾತಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ 25 ಸಾವಿರ ಮುಳುಗಡೆ ಸಂತ್ರಸ್ತ ಕುಟುಂಬಗಳು ಅತಂತ್ರವಾಗಿವೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಥಹಳ್ಳಿಯ ಪಟ್ಟಣ ಪಂಚಾಯ್ತಿ ಕಾರ್ಯಾಲಯದ ಎದುರು ಶರಾವತಿ ಸಂತ್ರಸ್ತರ ಅಹವಾಲು ಸ್ವೀಕರಿಸಿದರು.
ಈ ವೇಳೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಕೆ.ಸಿ.ನಾರಾಯಣ ಗೌಡ, ಬೈರತಿ ಬಸವರಾಜ್ ಹಾಜರಿದ್ದರು.

ಕಾಂಗ್ರೆಸ್ ಪಾದಯಾತ್ರೆ ಇಂದು:
ಶರಾವತಿ ಸಂತ್ರಸ್ತರ ಸಮಸ್ಯೆ ಮುಂದಿಟ್ಟುಕೊಂಡು ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಸೋಮವಾರ ಆಯನೂರಿನಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿದ್ದಾರೆ. ಸಂಜೆ ಶಿವಮೊಗ್ಗದಲ್ಲಿ ಸಂತ್ರಸ್ತರ ಬೃಹತ್ ಸಮಾವೇಶ ಆಯೋಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT