ಮಂಗಳವಾರ, ಡಿಸೆಂಬರ್ 1, 2020
21 °C
ಕರ್ನಾಟಕ ವಿದ್ಯುತ್‌ ನಿಗಮಕ್ಕೆ ಹೈಕೋರ್ಟ್‌ ಆದೇಶ

ಶರಾವತಿ ಅಭಯಾರಣ್ಯದಲ್ಲಿ ರಂಧ್ರ ಕೊರೆತಕ್ಕೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಹೈಕೋರ್ಟ್‌

ಬೆಂಗಳೂರು: ಶರಾವತಿ ಭೂಗರ್ಭ ಜಲ ವಿದ್ಯುತ್‌ ಯೋಜನೆಯ ಸಮೀಕ್ಷೆಗಾಗಿ ಶರಾವತಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ರಂಧ್ರ ಕೊರೆಯದಂತೆ ಕರ್ನಾಟಕ ವಿದ್ಯುತ್‌ ನಿಗಮಕ್ಕೆ (ಕೆಪಿಸಿಎಲ್‌) ನಿರ್ಬಂಧ ವಿಧಿಸಿ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ಆದೇಶ ಹೊರಡಿಸಿದೆ.

ಬಳ್ಳಾರಿಯ ಪರಿಸರ ಹೋರಾಟಗಾರ ಎಡ್ವರ್ಡ್‌ ಸಂತೋಷ್‌ ಮಾರ್ಟಿನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ‘ರಾಜ್ಯ ವನ್ಯಜೀವಿ ಮಂಡಳಿ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗಳು ಸರಿಯಾಗಿ ಯೋಚಿಸದೆ ಅಭಯಾರಣ್ಯದೊಳಗೆ ರಂಧ್ರ ಕೊರೆಯಲು ಅನುಮತಿ ನೀಡಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ’ ಎಂದು ಹೇಳಿತು.

2,000 ಮೆಗಾವಾಟ್‌ ಸಾಮರ್ಥ್ಯದ ಭೂಗರ್ಭ ಜಲ ವಿದ್ಯುತ್‌ ಯೋಜನೆಯ ಅನುಷ್ಠಾನಕ್ಕಾಗಿ ಕೆಪಿಸಿಎಲ್‌, ಜೋಗ ಸುತ್ತಮುತ್ತ 15 ಸ್ಥಳಗಳಲ್ಲಿ ಭೂಮಿಯಲ್ಲಿ ರಂಧ್ರ ಕೊರೆದು ಸಮೀಕ್ಷೆ ನಡೆಸುತ್ತಿದೆ. ಸಮೀಕ್ಷೆಗೆ ಅನುಮತಿ ನೀಡುವ ಸಂಬಂಧ ರಾಜ್ಯ ವನ್ಯಜೀವಿ ಮಂಡಳಿ ಮತ್ತು ಕೇಂದ್ರ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗಳು ಒಪ್ಪಿಗೆ ನೀಡಿರುವ ಸಭೆಯ ನಡಾವಳಿಗಳನ್ನು ಹತ್ತು ದಿನಗಳೊಳಗೆ ಸಲ್ಲಿಸುವಂತೆ ನ್ಯಾಯಾಲಯ ಪ್ರತಿವಾದಿ ವಕೀಲರಿಗೆ ಸೂಚಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು