ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವರಿ 27ಕ್ಕೆ ಶಶಿಕಲಾ ಬಿಡುಗಡೆ?

₹10 ಕೋಟಿ ದಂಡ ಪಾವತಿಸದಿದ್ದರೆ ಮತ್ತೊಂದು ವರ್ಷ ಜೈಲುವಾಸ
Last Updated 16 ಸೆಪ್ಟೆಂಬರ್ 2020, 4:53 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಇಲ್ಲಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಪ್ರಮುಖರಾದ ವಿ.ಕೆ. ಶಶಿಕಲಾ ನಟರಾಜನ್, ₹10 ಕೋಟಿ ದಂಡ ಪಾವತಿಸಿದರೆ 2021ರ ಜನವರಿ 27ರಂದು ಬಿಡುಗಡೆಯಾಗಲಿದ್ದಾರೆ ಎಂದು ರಾಜ್ಯ ಕಾರಾಗೃಹ ಇಲಾಖೆ ಮಾಹಿತಿ ನೀಡಿದೆ.

ಟಿ.ನರಸಿಂಹಮೂರ್ತಿ ಎಂಬುವವರು ಶಶಿಕಲಾ ಬಿಡುಗಡೆ ಮಾಹಿತಿ ಕೋರಿ ಇಲಾಖೆಗೆ ಆರ್‌ಟಿಐ ಅರ್ಜಿ ಹಾಕಿದ್ದರು. ಇದಕ್ಕೆ ಉತ್ತರಿಸಿರುವ ಇಲಾಖೆ, ‘ಒಂದು ವೇಳೆ ₹10 ಕೋಟಿ ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ವರ್ಷ ಜೈಲಿನಲ್ಲೇ ಇರಬೇಕಾಗುತ್ತದೆ. ಆಗ 2022ರ ಫೆ.27ರಂದು ಬಿಡುಗಡೆಯಾಗಲಿದ್ದಾರೆ’ ಎಂದು ಮಾಹಿತಿ ನೀಡಿದೆ.

ಶಶಿಕಲಾ ಪತಿ ಎಂ.ನಟರಾಜನ್ ನಿಧನರಾದಾಗ ಪೆರೋಲ್ ಮೇಲೆ 15 ದಿನ ಜೈಲಿನಿಂದ ಹೊರಗಿದ್ದರು. ‘ಪೆರೋಲ್ ರಜೆಗಳನ್ನು ಗಣನೆಗೆ ತೆಗೆದುಕೊಂಡರೆ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಗಲಿದೆ’ ಎಂದೂಕಾರಾಗೃಹ ಇಲಾಖೆ ತಿಳಿಸಿದೆ.

ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಶಶಿಕಲಾಗೆ 2017ರಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT