ಬುಧವಾರ, ಏಪ್ರಿಲ್ 14, 2021
23 °C

‘ಕಾನ್‌ಸ್ಟೆಬಲ್‌ ಹುದ್ದೆ ಭರ್ತಿ ಬಳಿಕ ಪಾಳಿ ವ್ಯವಸ್ಥೆ’–ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾನ್‌ಸ್ಟೇಬಲ್‌ ನೇಮಕಾತಿ–ಸಾಂದರ್ಭಿಕ ಚಿತ್ರ

ಬೆಂಗಳೂರು: ‘ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಗಳನ್ನು ಸಂಪೂರ್ಣ ಭರ್ತಿ ಮಾಡಿದ ಬಳಿಕ ಪಾಳಿ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಪರಿಷತ್‍ನಲ್ಲಿ ಕಾಂಗ್ರೆಸ್ಸಿನ ಎಸ್. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಎರಡು ವರ್ಷಗಳ ಅವಧಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೇಮಕಾತಿ ನಡೆದಿದೆ. ಪಿಎಸ್‍ಐನಿಂದ ಕಾನ್‍ಸ್ಟೆಬಲ್‍ವರೆಗೆ 16 ಸಾವಿರಕ್ಕಿಂತಲೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನೂ 23 ಸಾವಿರ ಹುದ್ದೆಗಳು ಖಾಲಿ ಇವೆ. ಶೀಘ್ರದಲ್ಲೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು