ಶಿವಮೊಗ್ಗ/ಶಿಕಾರಿಪುರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಜಿಲ್ಲೆಯ ಬಹುತೇಕ ಜನರು ಮೌನಕ್ಕೆ ಶರಣಾಗಿದ್ದಾರೆ. ತವರು ಕ್ಷೇತ್ರ ಶಿಕಾರಿಪುರ, ಶಿರಾಳಕೊಪ್ಪದಲ್ಲಿ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿ ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸಿದ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ನಿರ್ಧಾರ ಘೋಷಿಸುತ್ತಿದ್ದಂತೆ ಶಿಕಾರಿಪುರದಲ್ಲಿ ದುಃಖ ಮಡುಗಟ್ಟಿತ್ತು.

ಪಕ್ಷದ ಮುಖಂಡರು, ಕಾರ್ಯಕರ್ತರು ಯಡಿಯೂರಪ್ಪ ಪರ ಜೈಕಾರ ಕೂಗುತ್ತ ಪ್ರಮುಖ ರಸ್ತೆಗಳಲ್ಲಿ ಹೆಜ್ಜೆ ಹಾಕಿದರು.ಕೆಲವರು ಬಿಜೆಪಿ ಹೈಕಮಾಂಡ್, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.

ಸಚಿವ ಯೋಗೀಶ್ವರ್, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭಾವಚಿತ್ರಕ್ಕೆ ಚಪ್ಪಲಿಯಿಂದಹೊಡೆದು, ದಹನ ಮಾಡಿದರು. ಮಾಳೇರಕೇರಿಯ ನಿವಾಸದಲ್ಲಿ ಮೌನ ಆವರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.