ಕನ್ನಡಪರ ಹೋರಾಟಗಾರರು, ಶಿವಾಜಿ ಅಭಿಮಾನಿಗಳ ಸಭೆ ಯಶಸ್ವಿ
ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಎಡಿಜಿಪಿ, ಡಿಸಿ ಮಾಲಾರ್ಪಣೆ

ಬೆಳಗಾವಿ: ಪೀರನವಾಡಿಯಲ್ಲಿ ಶುಕ್ರವಾರ ನಸುಕಿನಲ್ಲಿ ಕನ್ನಡಪರ ಹೋರಾಟಗಾರರು ಪ್ರತಿಷ್ಠಾಪಿಸಿದ್ದ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಎಡಿಜಿಪಿ ಅಮರ್ಕುಮಾರ್ ಪಾಂಡೆ ಹಾಗೂ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ರಾತ್ರಿ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಕನ್ನಡಪರ ಹೋರಾಟಗಾರರು, ಶಿವಾಜಿ ಅಭಿಮಾನಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ನಡೆದ ಸಭೆ ಯಶಸ್ವಿಯಾದ್ದರಿಂದ ಅಧಿಕಾರಿಗಳು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಪ್ರತಿಮೆಯನ್ನು ಅದೇ ಸ್ಥಳದಲ್ಲೇ ಉಳಿಸಲು ಹಾಗೂ ವೃತ್ತಕ್ಕೆ ಶಿವಾಜಿ ಹೆಸರಿಡಲು ಕನ್ನಡ ಹಾಗೂ ಮರಾಠಿ ಭಾಷಿಕ ಮುಖಂಡರು ಸಭೆಯಲ್ಲಿ ಸಮ್ಮತಿಸಿದ್ದರು. ಹಲವು ಗಂಟೆಗಳ ಸಭೆಯ ಬಳಿಯ ಈ ನಿರ್ಧಾರಕ್ಕೆ ಬರಲಾಗಿದೆ.
ಇದನ್ನೂ ಓದಿ: Explainer | ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ- ಇದು ಸಮಗ್ರ ಚಿತ್ರಣ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.