ಮಂಗಳವಾರ, ಜನವರಿ 18, 2022
23 °C

ಶಿವಮೊಗ್ಗ: 29 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಇಲ್ಲಿಯ ಗಾಡಿಕೊಪ್ಪ ಸಮೀಪದ ನಂಜಪ್ಪ ಲೈಫ್‌ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅವರಲ್ಲಿ 23 ವಿದ್ಯಾರ್ಥಿಗಳು ಕೇರಳದವರು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.

ಕೇರಳದಿಂದ ನವೆಂಬರ್‌ 23ರಂದು ವಾಪಸಾಗಿದ್ದ 23 ನರ್ಸಿಂಗ್ ವಿದ್ಯಾರ್ಥಿಗಳು ಸೇರಿ ವಸತಿನಿಲಯದಲ್ಲಿದ್ದ 384 ವಿದ್ಯಾರ್ಥಿಗಳಿಗೆ ಬುಧವಾರ ಕೋವಿಡ್‌ ಪರೀಕ್ಷೆ ಮಾಡಲಾಗಿತ್ತು.

ಕೇರಳದ 23 ವಿದ್ಯಾರ್ಥಿಗಳು ರಜೆಯಲ್ಲಿ ತವರಿಗೆ ಹೋಗಿದ್ದರು. ರಜೆ ಅವಧಿ ಮುಗಿದು, ಪರೀಕ್ಷೆ ಇದ್ದುದರಿಂದ ಮಂಗಳವಾರ ಕಾಲೇಜಿಗೆ ಮರಳಿದ್ದರು. ಕೇರಳದಿಂದ ಬರುವಾಗ ನೆಗೆಟಿವ್‌ ವರದಿಯನ್ನು ತಂದಿದ್ದರು. ಬಂದ ನಂತರ ಒಂದು ವಾರ ಅವರನ್ನು ಕ್ವಾರಂಟೈನ್‌ ಮಾಡಲಾಗಿತ್ತು.

ವಿದ್ಯಾರ್ಥಿಗಳಿಗೆ ಕೋವಿಡ್ ದೃಢವಾಗುತ್ತಿದ್ದಂತೆ ಅವರ ಪ್ರಾಥಮಿಕ ಸಂಪರ್ಕದಲ್ಲಿರುವವರ ಪತ್ತೆ ಕಾರ್ಯ ಆರಂಭಿಸಲಾಗಿದೆ. ಗುರುವಾರ ನಂಜಪ್ಪ ಲೈಫ್‌ ಕೇರ್ ಆಸ್ಪತ್ರೆ, ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿ 800ಕ್ಕೂ ಹೆಚ್ಚು ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಸ್ಪತ್ರೆ ಸಿಬ್ಬಂದಿಯಲ್ಲಿ 9 ಮಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. 

ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯ ಒಪಿಡಿ, ನರ್ಸಿಂಗ್ ಕಾಲೇಜು, ಹಾಸ್ಟೆಲ್ ಬಂದ್ ಮಾಡಲಾಗಿದೆ. ಆಸ್ಪತ್ರೆ ಆವರಣದೊಳಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು