ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅಥವಾ ಕೆಳದಿಯ ಶಿವಪ್ಪ ನಾಯಕ ಅವರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸೋಮವಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕುವೆಂಪು ಹೆಸರು ಇಡಬಹುದು ಎಂದು ಬಿ.ಎಸ್.ಯಡಿಯೂರಪ್ಪ ಅವರ ಸಲಹೆ ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದಿತು. ಆಗ ಕೆಳದಿಯ ಶಿವಪ್ಪನಾಯಕರ ಹೆಸರೂ ಪ್ರಸ್ತಾಪವಾಯಿತು ಎಂದು ಮೂಲಗಳು ತಿಳಿಸಿವೆ.
ಇದೇ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನನಿಲ್ದಾಣ ಉದ್ಘಾಟಿಸುವರು. ಆ ದಿನವೇ ಹೆಸರು ಪ್ರಕಟಿಸುವ ಸಾಧ್ಯತೆಗಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.