ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಸ್ಫೋಟ ಪ್ರಕರಣ; ರಾಜ್ಯ ಸರ್ಕಾರ ತನಿಖೆಗೆ ಕುಮಾರಸ್ವಾಮಿ ಒತ್ತಾಯ

Last Updated 22 ಜನವರಿ 2021, 5:57 IST
ಅಕ್ಷರ ಗಾತ್ರ

ಶಿವಮೊಗ್ಗ: ಶಿವಮೊಗ್ಗದ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಗುರುವಾರ ಸಂಭವಿಸಿರುವ ಸ್ಫೋಟ ದುರಂತದ ಬಗ್ಗೆ ಸಂತಾಪ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತ ಕುಂಟುಗಳಿಗೆ ಸಾಂತ್ವನ ಹೇಳಿದ್ದಾರೆ.

'ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ' ಎಂದು ಕುಮಾರಸ್ವಾಮಿ ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಂಡು ಮುಂದೆ ಇಂತಹ ದುರಂತಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ರಾಜ್ಯ ಸರ್ಕಾರ ತನಿಖೆ ಕೈಗೊಳ್ಳುವಂತೆ ಮನವಿ ಮಾಡಿದರು.

'ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದರು.

ಗುರುವಾರ ರಾತ್ರಿ ಅಬ್ಬಲಗೆರೆ-ಹುಣಸೋಡು ಮಧ್ಯ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟಿಸಿ ಬಿಹಾರ ಮೂಲದ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT