ಶಿವಮೂರ್ತಿ ಮುರುಘಾ ಶರಣರು ಅಕ್ಷಮ್ಯ ಅಪರಾಧ ಮಾಡಿದ್ದಾರೆ: ಯಡಿಯೂರಪ್ಪ

ಉಡುಪಿ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಮಂಗಳವಾರ ಆದಿ ಉಡುಪಿ ಹೆಲಿಪ್ಯಾಡ್‌ನಲ್ಲಿ ಮಾತನಾಡಿ, ಮುರುಘಾ ಶರಣರು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಕಾನೂನಿನ ಪ್ರಕಾರ ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು.
ಕಾಂಗ್ರೆಸ್‌ನದ್ದು ತಿರುಕನ ಕನಸು
ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಬಿಜೆಪಿ ಪರವಾದ ಅಲೆ ಇದೆ. ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಕಾಂಗ್ರೆಸ್ ನಾಯಕರು ಅಧಿಕಾರ ಹಿಡಿಯುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಯಡಿಯೂರಪ್ಪ ವ್ಯಂಗ್ಯವಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.