ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಕಾಯ್ದೆ ಅಡಿ ಮುರುಘಾ ಶರಣರ ವಿರುದ್ಧದ ಪ್ರಕರಣ: ವರದಿ ಸಲ್ಲಿಸಲು ಸೂಚನೆ

Last Updated 4 ಸೆಪ್ಟೆಂಬರ್ 2022, 6:28 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ (ಎಸ್ಸಿ ಎಸ್ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಆಯೋಗ ವಿವರವಾದ ವರದಿ ಕೇಳಿದೆ.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪನಿರ್ದೇಶಕರಿಗೆ ಆಯೋಗದ ಕಾರ್ಯದರ್ಶಿ ನೋಟಿಸ್ ನೀಡಿದ್ದಾರೆ.

ಪರಿಶಿಷ್ಟ ಜಾತಿಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಬಾಲಕಿಯ ಭವಿಷ್ಯದ ಮೇಲೆ ಇದು ಪರಿಣಾಮ ಬೀರಲಿದೆ. ಈ ಬಗ್ಗೆ ವಿವರವಾದ ವರದಿ ನೀಡಿ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT