ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಶ್ರೀ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ತ್ವರಿತ ತನಿಖೆಗೆ ಆಗ್ರಹ

Last Updated 1 ಸೆಪ್ಟೆಂಬರ್ 2022, 21:39 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ಆರೋಪದ ವಿಚಾರಣೆಯನ್ನು ತ್ವರಿತವಾಗಿ, ಪಾರದರ್ಶಕವಾಗಿ ನಡೆಸಬೇಕು ಎಂದು ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಜಿ.ರಾಮಕೃಷ್ಣ, ರಾಜೇಂದ್ರ ಚೆನ್ನಿ, ಅಲ್ಲಮಪ್ರಭು ಬೆಟ್ಟದೂರು, ಜೆ.ಎಸ್‌.ಪಾಟೀಲ, ಶಂಕರ ಹಲಗತ್ತಿ, ಕೆ.ನೀಲಾ, ಸಿದ್ದನಗೌಡ ಪಾಟೀಲ ಒತ್ತಾಯಿಸಿದ್ದಾರೆ.

ಶರಣರು ಮಠದ ವಸತಿ ಶಾಲೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದು ಗಂಭೀರ ಆರೋಪ. ಈ ಸಮಯದಲ್ಲಿ ಶರಣರು ನೀಡಿದ ‘ಸಂಧಾನಕ್ಕೂ ಸಿದ್ಧ, ಸಮರಕ್ಕೂ ಸಿದ್ಧ’ ಎಂಬ ಹೇಳಿಕೆ ಅವರ ಘನತೆ ಹೆಚ್ಚಿಸುವಂತಿರಲಿಲ್ಲ. ಸಂಧಾನ, ಸಮರ ಮಠದ ಆಂತರಿಕ ವಿಚಾರ. ಆದರೆ, ಆರೋಪ ಮಾಡಿರುವ ಹೆಣ್ಣು ಮಕ್ಕಳ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರಿದ್ದಾರೆ. ಸರ್ಕಾರ ಮತ್ತು ಪೊಲೀಸ್‌ ಸಹ ಅವರ ಹಿತರಕ್ಷಣೆಯನ್ನು ಆದ್ಯತೆಯ ವಿಚಾರವಾಗಿ ಪರಿಗಣಿಸಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೋಕ್ಸೊ ಕಾಯ್ದೆ, ದಲಿತರ ಮೇಲೆ ಎಸಗಿದ ದೌರ್ಜನ್ಯದಂತಹ ದೂರುಗಳು ದಾಖಲಾದರೂ ತನಿಖೆ ಆಮೆಗತಿಯಲ್ಲಿ ನಡೆಯುತ್ತಿದೆ. ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಕ್ಷಿಪ್ರವಾಗಿ ನ್ಯಾಯ ದೊರಕದಿದ್ದರೆ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರು ನಂಬಿಕೆ ಕಳೆದುಕೊಳ್ಳುವ ಸಂಭವವಿದೆ.ಸರ್ಕಾರ ಇತ್ತ ತುರ್ತುಗಮನ ಹರಿಸಬೇಕು. ಬಡ ಹೆಣ್ಣುಮಕ್ಕಳಿಗೆ ನ್ಯಾಯ ಒದಗಿಸಬೇಕು. ಆರೋಪ ಸುಳ್ಳಾಗಿದ್ದರೆ ನ್ಯಾಯ ಸಮ್ಮತವಾಗಿ ಅದು ಗೊತ್ತಾಗಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT