ಬುಧವಾರ, ಫೆಬ್ರವರಿ 8, 2023
18 °C

ಶಿವಮೂರ್ತಿ ಶರಣರಿಂದ ಲೈಂಗಿಕ ಕಿರುಕುಳ ಆರೋಪ: ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಎರಡನೇ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಜಿಲ್ಲಾ ‌ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.

ತನಿಖಾಧಿಕಾರಿ ಜ.10ರಂದು ಸಲ್ಲಿಸಿದ ದೋಷಾರೋಪ ಪಟ್ಟಿ ಇನ್ನೂ ನ್ಯಾಯಾಲಯದ ಪರಿಶೀಲನೆಯ ಹಂತದಲ್ಲಿದೆ. ದೋಷಾರೋಪಪಟ್ಟಿ ನ್ಯಾಯಾಲಯದಲ್ಲಿ ಸ್ವೀಕೃತವಾದ ಬಳಿಕ ವಿವರಗಳು ಲಭ್ಯವಾಗಲಿವೆ ಎಂದು ಮೂಲಗಳು ಮಾಹಿತಿ ನೀಡಿವೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೋಕ್ಸೊ ಕಾಯ್ದೆಯಡಿ ಅ.13ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಗ್ರಾಮಾಂತರ ಠಾಣೆಯ ಪೊಲೀಸರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. ಮೊದಲ ಪ್ರಕರಣದ ದೋಷಾರೋಪಪಟ್ಟಿ ಸೋರಿಕೆ ಆಗಿದ್ದರಿಂದ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು